18 Nov 2026, 12:41:48 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಕ್ಕಸಕೊಪ್ಪ ಜಲಾಶಯಕ್ಕೆ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಭೇಟಿ

ಬೆಳಗಾವಿ-04: ಪಶ್ಚಿಮ ಘಟ್ಟ ಪ್ರದೇಶ ಮತ್ತು ತಿಲಾರಿ ಭಾಗದಲ್ಲಿ ಇತ್ತೀಚೆಗೆ ಸುರಿದ

ಭಾರಿ ಮಳೆಯಿಂದಾಗಿ ರಕ್ಕಸ ಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು ಜಲಾಶಯಕ್ಕೆ ಭೇಟಿ ನೀಡಿ ನೀರಿನ ಮಟ್ಟ, ಒಳ ಮತ್ತು ಹೊರಹರಿವು ಹಾಗೂ ಸಾಮರ್ಥ್ಯವನ್ನು ಪರಿಶೀಲಿಸಿದರು.
ಕುಡಿಯುವ ನೀರಿಗಾಗಿ ಬೆಳಗಾವಿ ನಗರದ ಜನತೆ ಹೆಚ್ಚಾಗಿ ರಕ್ಕಸಕೊಪ್ಪ ಜಲಾಶಯದ ಮೇಲೆ ಅವಲಂಬಿತರಾಗಿದ್ದು, ಮಾನ್ಸೂನ್ ಕೈಕೊಟ್ಟಿದ್ದರಿಂದ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಖಾಲಿಯಾಗಿದ್ದರ
ಪರಿಣಾಮವಾಗಿ ಬೆಳಗಾವಿಗರಿಗೆ ನೀರಿನ ವ್ಯತ್ಯಯ ಉಂಟಾಗಿತ್ತು.
ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಪಾಲಿಕೆಯು ಪರ್ಯಾಯ ವ್ಯವಸ್ಥೆಯನ್ನೂ ಮಾಡಿತ್ತು.
ಈಗ ಪ್ರತಿದಿನ 40ರಿಂದ 50 ಮಿ.ಮೀ. ಮಳೆ ಆಗುತ್ತಿರುವುದರಿಂದ ಜಲಾಶಯ ಭರ್ತಿಯಾಗಿ ನಗರದ ಜನತೆಯಲ್ಲಿ ಸಂತಸ ಮೂಡಿಸಿದೆ.
ಜಲಾಶಯ ಪರಿಶೀಲನೆ ನಂತರ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಂ. ಆವರು, ರಕ್ಕಸಕೊಪ್ಪ ಮತ್ತು ಹಿಡಕಲ್ ಎರಡೂ ಜಲಾಶಯಗಳಿಂದ
ನಗರಕ್ಕೆ ನೀರು ಪೂರೈಕೆ ಆಗುತ್ತಿದೆ. 10 ವಾರ್ಡುಗಳಲ್ಲಿ ದಿನದ 24 ಗಂಟೆ ನೀರು ಸರಬರಾಜು ವ್ಯವಸ್ಥೆ ಇದೆ. ನೀರಿನ ಕೊರತೆಯಿಂದಾಗಿ ಈ ಮೊದಲು 2 ರಿಂದ 3 ದಿನಗಳಿಗೊಮ್ಮೆ 2 ಗಂಟೆ ಮಾತ್ರ ನೀರು ಸರಬರಾಜು ಇತ್ತು. ಈಗ ಡ್ಯಾಮ್ ಭರ್ತಿಯಾಗಿದ್ದರಿಂದ ಈ ಮೊದಲಿನಂತೆ 24 ಗಂಟೆಯೂ ನೀರು ಸರಬರಾಜು ಆಗಲಿದೆ.
ಉಳಿದ 48 ವಾರ್ಡಗಳಲ್ಲಿ ಬೇಸಿಗೆಯಲ್ಲಿ 8 ರಿಂದ 10 ದಿನಗಳಿಗೊಮ್ಮೆ ನೀರು ಬಿಡಲಾಗುತ್ತಿತ್ತು. ಈಗ 2 ರಿಂದ 3 ದಿನಗಳಿಗೊಮ್ಮೆ ಬಿಡಲಾಗುತ್ತಿದೆ.
ರಕ್ಕಸಕೊಪ್ಪ ಜಲಾಶಯ 2475 ಅಡಿ ಎತ್ತರವಿದ್ದು, ಸಂಪೂರ್ಣ ಭರ್ತಿಯಾಗಿದೆ.
ರಕ್ಕಸಕೊಪ್ಪ ಮತ್ತು ಹಿಡಕಲ್ ಜಲಾಶಯದಿಂದ ಒಟ್ಟು 105 ಎಂಎಲ್‌ಡಿ ನೀರು ಸರಬರಾಜು ಆಗುತ್ತಿರುವುದರಿಂದ ಮೇ ವರೆಗೆ ನೀರಿನ ಸಮಸ್ಯೆಯಾಗದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಯುಡಿಎಫ್ ಸಿ ಅಭಿಯಂತರ, ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

03/08/2026

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ