18 Nov 2026, 12:13:06 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸಂವಿಧಾನ ಹಾಗೂ ಮತದಾನದ ಹಕ್ಕಿನ ರಕ್ಷಣೆಗೆ ಕಾಂಗ್ರೆಸ್ ಹೋರಾಟ: ದೆಹಲಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ನವದೆಹಲಿ:14

ದೇಶದಲ್ಲಿ ಸಂವಿಧಾನ ಹಾಗೂ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿದ್ದು, ಪ್ರಜಾಪ್ರಭುತ್ವದ ರಕ್ಷಣೆಗಾಗಿ ರಾಷ್ಟ್ರವ್ಯಾಪಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ (ಪೀಸ್ ಮಾರ್ಚ್) ಕೈಗೊಳ್ಳಲಾಗಿದೆ ಎಂದು ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ನ ಬೃಹತ್ ಪ್ರತಿಭಟನೆಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹೋರಾಟ ಕೇವಲ ರಾಜಕೀಯ ಪಕ್ಷಕ್ಕಷ್ಟೇ ಸೀಮಿತವಲ್ಲ, ಬದಲಿಗೆ ಇಡೀ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕಿನ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಕರೆಯ ಮೇರೆಗೆ ದೇಶದ ಎಲ್ಲ ರಾಜ್ಯಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಮುಖಂಡರು ದೆಹಲಿಗೆ ಆಗಮಿಸಿದ್ದಾರೆ. ಮಹಿಳೆ-ಪುರುಷರೆಂಬ ಭೇದವಿಲ್ಲದೆ, ಪಕ್ಷಾತೀತವಾಗಿ ಎಲ್ಲಾ ಸಂಘಟನೆಗಳು ಹಾಗೂ ಸಮಸ್ತ ನಾಗರಿಕರು ಸಂವಿಧಾನ ರಕ್ಷಣೆಯ ಈ ಪೀಸ್ ಮಾರ್ಚ್‌ನಲ್ಲಿ ಕೈಜೋಡಿಸುವಂತೆ ಕರೆ ನೀಡಲಾಗಿದೆ. ಈ ಶಾಂತಿಯುತ ಪ್ರತಿಭಟನಾ ಮೆರವಣಿಗೆಯ ಮೂಲಕ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸುವ ಕಾರ್ಯಕ್ರಮವೂ ಇದೆ ಎಂದು ಅವರು ವಿವರಿಸಿದರು.

ಮತದಾನದ ಹಕ್ಕು ಕಸಿಯುವ ಹುನ್ನಾರ:
"ಭಾರತ ದೇಶದ ಇತಿಹಾಸಕ್ಕೆ ಜೀವಂತ ಸಾಕ್ಷಿ ನಮ್ಮ ಸಂವಿಧಾನ. ಸಂವಿಧಾನ ನೀಡಿರುವ ಅತ್ಯಂತ ಶಕ್ತಿಶಾಲಿ ಅಸ್ತ್ರವೆಂದರೆ ಅದು ಮತದಾನದ ಹಕ್ಕು. ಬಡವ-ಶ್ರೀಮಂತ ಹಾಗೂ ಸಮಾಜದ ಪ್ರತಿಯೊಂದು ವರ್ಗಕ್ಕೂ ಸಮಾನವಾಗಿ ಸಿಕ್ಕಿರುವ ಈ ಅಮೂಲ್ಯ ಹಕ್ಕನ್ನು ಇಂದು ಕಸಿದುಕೊಳ್ಳಲಾಗುತ್ತಿದೆ. ಮತಗಳ ಕಳ್ಳತನ (ವೋಟ್ ಚೋರಿ) ಮಾಡುವ ಮೂಲಕ ಪ್ರಜಾಪ್ರಭುತ್ವದ ಮೂಲ ಅಡಿಪಾಯವನ್ನೇ ಬುಡಮೇಲು ಮಾಡಲು ಪ್ರಯತ್ನಿಸಲಾಗುತ್ತಿದೆ" ಎಂದು ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ