18 Nov 2026, 12:45:32 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸರ್ಕಾರದ ಹಿರಿಯ ಕಾರ್ಯದರ್ಶಿಗಳಿಗೆ ಶುಭಾಶಯ ಕೋರಿದ ಸಿಎಂ

ಬೆಂಗಳೂರು-01: ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024 ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಿದೆ ಎಂದರು.

ರಾಜ್ಯದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಇಂದು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಪ್ರಕೃತಿ ಸಹಾಯವಿಲ್ಲದಿದ್ದರೆ, ಸರ್ಕಾರ ಏನು ಪರಿಹಾರ ಕೊಟ್ಟರು ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆ ಮಳೆಯಾಗುವ ನಿರೀಕ್ಷೆ ಇದೆ. 2024 ರಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುವುದಾಗಿ ತಿಳಿಸಿದರು.

ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆ
ಅಭಿವೃದ್ಧಿ ನಿರೀಕ್ಷಿತ ಫಲ ಕಾಣಲು ಸಮೃದ್ಧಿಯಾಗಿ ಮಳೆಯಾಗಲಿ. ಶೇ. 60 ಕ್ಕೂ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆಯಾಗಿದೆ. ಬಡವರ ಕುಟುಂಬಕ್ಕೆ ಹಣ ದೊರೆಯುತ್ತಿದ್ದು ಕೊಳ್ಳುವ ಶಕ್ತಿ ಇದೆ. ಬರಗಾಲವಿದ್ದರೂ ಸ್ವಲ್ಪ ಮಟ್ಟಿಗೆ ಅದರ ತೀವ್ರತೆ ಕಡಿಮೆಯಾಗಿದೆ ಎಂದು ಅಭಿಪ್ರಾಯ ಪಟ್ಟರು. ಇಲ್ಲದಿದ್ದರೆ ಹಾಹಾಕಾರ ಶುರುವಾಗುತ್ತಿತ್ತು. ಸಾರ್ವತ್ರಿಕ ಮೂಲ ಆದಾಯದ ತತ್ವದ ತಳಹದಿಯ ಮೇಲೆ ಜನರ ಆದಾಯ ಹೆಚ್ಚಿಸಿ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆತಿದೆ ಎಂದರು. ರಾಜ್ಯ ದ ಜನರ ಅಭಿವೃದ್ಧಿಗಾಗಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಸರ್ಕಾರ ಆಡಳಿತ ವರ್ಗವನ್ನು ಆಯ್ಕೆ ಮಾಡಿದೆ. ಜನಪರ, ಸಮಾಜಮುಖಿ ಧೋರಣೆ ಇದ್ದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು, ಸಂವಿಧಾನದ ಆಶಯಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದರು.

ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕಿದೆ
ಸಂವಿಧಾನ ಅರಿತು ಅದರಂತೆ ನಡೆಯಬೇಕಿದೆ. ಈ ದಿಕ್ಕಿನಲ್ಲಿ ಪ್ರಯತ್ನ ಮಾಡೋಣ. ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕಿದೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಜೀರ್ ಅಹ್ಮದ್ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸರ್ಕಾರದ ಅಭಿವೃದ್ಧಿ ಆಯುಕ್ತ ರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಅವರು ಬರೆದಿರುವ ' ಸುಸ್ಥಿರ ಬದುಕಿನ ಸುತ್ತ ಆಶಾಕಿರಣ' ಪುಸ್ತಕವನ್ನು ಮುಖ್ಯ ಮಂತ್ರಿಗಳು ಬಿಡುಗಡೆ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ