18 Nov 2026, 12:42:11 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸವದತ್ತಿ ಪಟ್ಟಣದ ಆರಾಧ್ಯ ದೇವತೆ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಸವದತ್ತಿ-11: ಸುಮಾರು 45 ವರ್ಷಗಳ ಬಳಿಕ ಅದ್ಧೂರಿಯಾಗಿ ಆಯೋಜಿಸಲಾದ ಸವದತ್ತಿ ಪಟ್ಟಣದ ಆರಾಧ್ಯ ದೇವತೆ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತರಾಗಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪುತ್ರ ಮೃಣಾಲ್ ಹೆಬ್ಬಾಳಕರ್ ಹಾಗೂ ಸೊಸೆ ಹಿತಾ ಹೆಬ್ಬಾಳಕರ್ ಅವರೊಂದಿಗೆ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ಗ್ರಾಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶ ಭಕ್ತರಿಂದ ಕಿಕ್ಕಿರಿದು ತುಂಬಿದ್ದು, ಭಕ್ತಿ ಹಾಗೂ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾತನಾಡಿ, “ಸವದತ್ತಿ ಪಟ್ಟಣದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಶ್ರೀ ಗ್ರಾಮದೇವಿ ಜಾತ್ರೆ ಜನರ ಭಕ್ತಿಭಾವದ ಪ್ರತೀಕವಾಗಿದೆ. ಇಂತಹ ಜಾತ್ರೆಗಳು ಸಮಾಜದಲ್ಲಿ ಏಕತೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು. ಲಕ್ಷ್ಮೀ ಹೆಬ್ಬಾಳಕರ್ ಅವರು ಭಕ್ತರೊಂದಿಗೆ ಬೆರೆತು ಕೆಲಹೊತ್ತು ಸಂಭ್ರಮಿಸಿದರು.
ಹಲವು ವರ್ಷಗಳ ಬಳಿಕ ನಡೆಯುತ್ತಿರುವ ಈ ಜಾತ್ರೆ ಜನರಲ್ಲಿ ವಿಶೇಷ ಉತ್ಸಾಹ ಮೂಡಿಸಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಿಯ ದರ್ಶನ ಪಡೆದು ಹರಕೆ ತೀರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ