18 Nov 2026, 12:39:17 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಉತ್ಸವ-2024

ಹಡಪದ ಅಪ್ಪಣ್ಣನವರು 12ನೇ ಶತಮಾನದ ವಚನ ಚಳವಳಿಕಾರ: ಡಾ. ಅವಿನಾಶ

ಬೆಳಗಾವಿ-20: ಶಿವಶರಣ ಹಡಪದ ಅಪ್ಪಣನವರು 12ನೇ ಶತಮಾನದ ವಚನ ಚಳುವಳಿ ಪ್ರಾರಂಭಿಸಿ, ನಿಜಸುಖಿ ಎಂದು ಹೆಸರು ಹೊಂದಿದವರು. ಬಸವಣ್ಣನವರ ಅನುಯಾಯಿಗಳಾಗಿ ಅವರ ನೆರಳಂತೆ ಬದುಕು ನಡೆಸಿದ್ದಾರೆ. ಹಡಪದ ಅಪ್ಪಣ್ಣನವರನ್ನು ನೆನೆದರೆ ಸಾಕ್ಷಾತ್ ಬಸವಣ್ಣನವರನ್ನು ನೆನಪಿಸಿಕೊಂಡತೆ ಎಂದು ಎನ್.ಎಮ್.ಸಿ. ಕಮ್ಯುನಿಟಿ ಮೆಡಿಸಿನ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಅವಿನಾಶ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ  ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ ಶ್ರೀ ಶಿವರಣ ಹಡಪದ ಅಪ್ಪಣ್ಣವರ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿಯೇ ಹಡಪದ ಅಪ್ಪಣ್ಣನವರಿಗೆ ನಿಜಸುಖಿ ಎಂದು ಬಸವಣ್ಣನವರು ಕರೆಯುತ್ತಿದ್ದರು. ಅಪ್ಪಣ್ಣನವರು ಅಂಗೈಯಲ್ಲಿ ಲಿಂಗ ಇಟ್ಟುಕೊಂಡು ಲಿಂಗವನ್ನು ನೋಡಿ ಅದರಲ್ಲಿಯೇ ತಲ್ಲೀನರಾಗಿರುತ್ತಿದ್ದರು ಎಂದು ಬಸವಬೆಳವಿಯ ಶರಣಬಸವ ದೇವರು ಹೇಳಿದರು.

ಡೋಹರ ಡಕ್ಕಯ್ಯ, ಅಂಬಿಗರ ಚೌಡಯ್ಯ, ಹಡಪದ ಅಪ್ಪಣ್ಣ, ಮೋಳಿಗೆಯ ಮಾರಯ್ಯ, ಮೇಧಾರ ಕೇತಯ್ಯ, ಸಮಗಾರ ಹರಳಯ್ಯ, ಸೊನ್ನಲಗದ ಸಿದ್ದರಾಮ ಸೇರಿದಂತೆ ಜಗತ್ತಿನ ಎಲ್ಲ ಧರ್ಮದ ಶರಣರಿಗೆ ಬಸವಣ್ಣನವರು 12ನೇ ಶತಮಾನದ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದ್ದರು.

ಹಡಪದ ಅಪ್ಪಣ್ಣನವರ ವಚನದಲ್ಲಿ ಲಾಲಿತ್ಯ, ಗುರು, ಲಿಂಗ, ಜಂಗಮ, ನಿಷ್ಠೆ ಇತ್ತು. ಹೀಗಾಗಿ ಹಡಪದ ಸಮಾಜ ಬಾಂಧವರೆಲ್ಲರೂ ಅಪ್ಪಣ್ಣನವರ ವಚನದ ಪುಸ್ತಕಗಳನ್ನು ಮನೆಯಲ್ಲಿಟ್ಟುಕೊಂಡು ನಿತ್ಯವೂ ಅವರ ವಚನಗಳನ್ನು ಮಕ್ಕಳಿಗೆ ಹಾಗೂ ಕುಟುಂಬದ ಎಲ್ಲರಿಗೂ ಓದಿಸಬೇಕು. ಅಂದರೆ ಮಾತ್ರ ಯುವ ಪೀಳಿಗೆ ಅಪ್ಪಣ್ಣನವರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಅನುಕೂಲವಾಗುತ್ತದೆ ಎಂದರು.

ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಅಪ್ಪಣ್ಣರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಅವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆ ಎಂದರೆ ತಪ್ಪಾಗಲಾರದು.

ಸಮಾಜದಲ್ಲಿ ಬೆಳಗ್ಗೆ ಎದ್ದ ತಕ್ಷಣವೇ ಹಡಪದ ಸಮುದಾಯದ ಜನರ ಮುಖ ನೋಡಬಾರದು ಎಂಬ ತಪ್ಪು ಕಲ್ಪನೆ ದೂರ ಮಾಡಲು ಬಸವಣ್ಣನವರು ಅಪ್ಪಣ್ಣನವರನ್ನು ತಮ್ಮ ಆಪ್ತ ಕಾರ್ಯದರ್ಶಿಯನ್ನಾಗಿ ಮಾಡಿಕೊಂಡು ತಮ್ಮನ್ನು ನೋಡಲು ಬರುವವರೆಲ್ಲರೂ ಮೊದಲು ಅಪ್ಪಣ್ಣನವರನ್ನು ಭೇಟಿ ಮಾಡಿ ಬರುವಂತೆ ಹೇಳುತ್ತಿದ್ದರು. ಇದು ಸಮಾನತೆಯ ಮೊದಲ ಹೆಜ್ಜೆಯಾಗಿದೆ.

ಹಡಪದ ಅಪ್ಪಣ್ಣನವರ ಧರ್ಮಪತ್ನಿ ಲಿಂಗಮ್ಮನವರೂ ಸಹ ಮಹಾನ್ ವಚನಗಾರ್ತಿಯಾಗಿದ್ದರು. ಇವರು ಸುಮಾರು ವಚನಗಳನ್ನು ಅಪ್ಪಣ್ಣ ಪ್ರಿಯ ಚನ್ನಬಸವಣ್ಣ ಎಂಬ ಅಂಕಿತನಾಮದಿಂದ ವಚನಗಳನ್ನು ರಚಿಸಿದ್ದಾರೆ. ಬಸವಣ್ಣನವರಿಗೆ ಅಪ್ಪಣ್ಣನವರು ಪ್ರಾಣವೇ ಆಗಿದ್ದರೆಂಬುದಕ್ಕೆ ಕಲ್ಯಾಣಕ್ರಾಂತಿಯ ಕೊನೆಯ ದಿನಗಳನ್ನು ತಿಳಿದುಕೊಂಡರೆ ಗೊತ್ತಾಗುತ್ತದೆ.

ಒಬ್ಬ ಕಾರ್ಯದರ್ಶಿ ಹೇಗೆ ಕಾರ್ಯನಿರ್ವಹಿಸಬೇಕೆಂಬುದಕ್ಕೆ ಹಡಪದ ಅಪ್ಪಣ್ಣನವರು ಒಂದು ಉತ್ತಮ ಉದಾಹರಣೆಯಾಗಿರುತ್ತಾರೆ. ಸತ್ಯದ ನಿಲುವುಗಳ್ಳನ್ನು ಕಂಡು ಕೊಂಡ ಇತಿಹಾಸ ಅದು ಶರಣರ ಜೀವನವನ್ನು ಅರಿತು ಅವರ ವಚನಗಳಿಂದ ಈಗಿನ ಜನತೆ ಜೀವನವನ್ನು ಕಂಡುಕೊಳ್ಳಬೇಕು ಎಂದು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರು ವಿದ್ಯಾವತಿ ಭಜಂತ್ರಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಬಸವರಾಜ ಹೆಗ್ಗನಾಯಕ, ಹಡಪದ ಸಮಾಜ ಜಿಲ್ಲಾ ಅಧ್ಯಕ್ಷರು ಸುರೇಶ ಹಡಪದ, ತಾಲೂಕಾ ಅಧ್ಯಕ್ಷ ಎಮ್.ಎಸ್. ಹಂಪನ್ನವರ, ರಾಜ್ಯ ಉಪಾಧ್ಯಕ್ಷರು ಸಂತೋಷ ಹಡಪದ, ಪಂಚಮ ಸಾಲಿ ಪ್ರಚಾರ ಸಮಿತಿ ಅಧ್ಯಕ್ಷ ರಾವಸಾಹೇಬ ಪಾಟೀಲ, ಲಿಂಗಾಯತ ಸಂಘಟನೆ ಅಧ್ಯಕ್ಷ ಈರಣ್ಣ ದಯನ್ನವರ, ಜಿಲ್ಲಾಯುವ ಘಟಕದ ಅಧ್ಯಕ್ಷ ಶಿವಪ್ಪ ಸವದಿ, ಸೇರಿದಂತೆ ಸಮಾಜದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.

ಮೆರವಣಿಗೆ ಕಾರ್ಯಕ್ರಮ:

ಇದಕ್ಕೂ ಮುಂಚೆ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮೆರವಣಿಗೆಗೆ ಚಾಲನೆ ನೀಡಿದರು. ನಗರದ ಅಶೋಕ ವೃತ್ತದಿಂದ ಪ್ರಾರಂಭವಾದ ಮೆರವಣಿಗೆ ನಗರದ ಕುಮಾರ ಗಂಧರ್ವ ಕಲಾ ಮಂದಿರದ ವರೆಗೆ ಬಂದು ಸಮಾರೋಪಗೊಂಡಿತು.
ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ಕುಂಭಮೇಳ ಸೇರಿದಂತೆ ವಿವಿಧ ಕಲಾ ತಂಡಗಳು ಪಾಲ್ಗೊಂಡಿದ್ದವು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಹಾಗೂ ಸಮಾಜದ ಮುಖಂಡರು ಉಪಸ್ಥಿತಿರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ