18 Nov 2026, 12:43:52 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶ್ರೀ ಸಂತ ಸೇವಾಲಾಲ್ ಜಯಂತಿ ಉತ್ಸವ -2025

ಸಂತ ಸೇವಾಲಾಲ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಡಾ.ಸುರೇಖಾ ರಾಠೋಡ
ಬೆಳಗಾವಿ-೧೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ (ಫೆ.15) ರಂದು ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ  ಶ್ರೀ ಸಂತ ಸೇವಾಲಾಲ್ ರವರ ಜಯಂತಿ ಉತ್ಸವ ನಡೆಯಿತು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಕರ್ನಾಟಕ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಸದಸ್ಯರಾದ ಡಾ. ಸುರೇಖಾ ರಾಠೋಡ ಅವರು, "ಸಂತ ಸೇವಾಲಾಲ್ ರವರು ಬಂಜಾರಾ ಸಮುದಾಯದ ಶ್ರೇಷ್ಠ ತಪಸ್ವಿಗಳಾಗಿದ್ದರು. ಇವರು ದುರ್ಗಾದೇವಿಯ ಆರಾಧಕರಾಗಿದ್ದುಕೊಂಡು ತಮ್ಮ ಜೀವಿತ ಅವಧಿಯಲ್ಲಿ ಬಹಳಷ್ಟು ಪವಾಡಗಳನ್ನು ಮಾಡಿದ್ದಾರೆ. ಶ್ರೀ ಸಂತ ಸೇವಾಲಾಲರು ಮಾನವತಾವಾದಿ ಸಂತರಾಗಿದ್ದರು. ಜನರಿಗೆ ಒಳ್ಳೆಯ ಉಪದೇಶಗಳನ್ನು ಕೊಡುತ್ತಿದ್ದರು" ಎಂದು ಹೇಳಿದರು.
ಶ್ರೀ ಸಂತ ಸೇವಾಲಾಲ ಅವರು  ದುಶ್ಚಟಗಳಾದ ಧೂಮಪಾನ, ಮಧ್ಯಪಾನ ಮತ್ತ ಕಳ್ಳತನಗಳನ್ನು ಮಾಡಬಾರದು ಎಂದು ಹೇಳಿದ್ದಾರೆ. ನಾವು ಅವರು ಕೊಟ್ಟಂತಹ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.
ಸಂತ ಸೇವಾಲಾಲ ಅವರು ಆವಾಗಲೇ ನೀರಿನ ಕೊರತೆಯ ಬಗ್ಗೆ ಹೇಳಿದ್ದರು. ಮುಂದಿನ ದಿನಮಾನಗಳಲ್ಲಿ ನೀರನ್ನು ಖರೀದಿಸಿ ಕುಡಿಯಬೇಕಾಗುತ್ತದೆ ಎಂದು  ಹೇಳಿದ್ದರು. ಅದು ಈಗ ಸತ್ಯವಾಗಿದೆ. ಸಮಾಜದ ಜನರು ಒಳ್ಳೆಯ ರೀತಿಯಲ್ಲಿ ಬದುಕಬೇಕು ಎಂದು ಉಪದೇಶಗಳನ್ನು ಕೊಟ್ಟ ಮಹಾನ್ ಸಂತ ಸೇವಾಲಾಲ ಅವರು ಆಗಿದ್ದಾರೆ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮಹಾನಗರ ಪಾಲಿಕೆಯ ಸದಸ್ಯೆ ಲಕ್ಷ್ಮೀ ರಾಠೋಡ, ಎಮ್.ಟಿ. ರಾಠೋಡ, ಆರ್.ಟಿ. ರಾಠೋಡ, ನಾರಾಯಣ ರಾಠೋಡ, ಮೋಹನಕುಮಾರ ಲಮಾಣಿ, ಯಮನಪ್ಪ ರಾಠೋಡ, ಅಶೋಕ ಪೂಜಾರಿ, ಪ್ರಭು ರಾಠೋಡ, ಪಾಂಡು ರಾಠೋಡ ಹಾಗೂ ಸಮಾಜದ ಹಲವಾರು ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶ್ರೀ ಸಂತ ಸೇವಾಲಾಲ ಅವರ ಭಾವಚಿತ್ರದ ಭವ್ಯ ಮೆರವಣಿಗೆ:
ಶ್ರೀ ಸಂತ ಸೇವಾಲಾಲ್ ಅವರ ಜಯಂತಿಯ ನಿಮಿತ್ತವಾಗಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಸಂತ ಸೇವಾಲಾಲ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ಶಾಸಕರಾದ ಆಸೀಫ್ (ರಾಜು) ಸೇಠ್ ರವರು  ಉದ್ಘಾಟಿಸಿದರು.
ನಗರದ ಅಶೋಕ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ಆರ್.ಟಿ.ಓ ವೃತ್ತದ ಮೂಲಕ ಕುಮಾರ ಗಂಧರ್ವ ಕಲಾ ರಂಗಮಂದಿರದವರೆಗೆ ನಡೆಯಿತು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ ವಿವಿಧ ಕಲಾ ತಂಡಗಳು ಜನರನ್ನು ಆಕರ್ಷಿಸಿದವು.
ಮಹಾನಗರ ಪಾಲಿಕೆಯ ಮಹಾಪೌರ ಸವಿತಾ ಕಾಂಬಳೆ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ಸಮಾಜದ ಮುಖಂಡರು ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ