18 Nov 2026, 12:31:26 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

*ವಿದ್ಯಾ ರೆಡ್ಡಿ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಜಿಲ್ಲಾ ಯುವ ಪ್ರಶಸ್ತಿ ಪ್ರಧಾನ*

ಗೋಕಾಕ-23 : ಗೋಕಾಕ ನಗರದ ಸಾಹಿತಿಗಳಾದ ಶ್ರೀಮತಿ ವಿದ್ಯಾ ರೆಡ್ಡಿ ಅವರು ಕಾದಂಬರಿ, ಕಥಾ ಸಂಕಲನ, ಕವನ ಸಂಕಲನ, ಲೇಖನಗಳ ಸಂಕಲನ, ಚುಟುಕು ಸಂಕಲನ, ವಿಮರ್ಶಾ ಸಂಕಲನಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ಇವರು ಸಾಹಿತ್ಯ ಮತ್ತು ಸಂಘಟನೆಯಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಹಾಗೂ ತಾಲೂಕಾ ಘಟಕ ಮೂಡಲಗಿ ಇವರ ವತಿಯಿಂದ ಕೊಡಮಾಡುವ 2025 ನೇ ಸಾಲಿನ ಕಿತ್ತೂರ ರಾಣಿ ಚೆನ್ನಮ್ಮ ಜಿಲ್ಲಾ ಯುವ ಪ್ರಶಸ್ತಿಯನ್ನು ಶ್ರೀಮತಿ ವಿದ್ಯಾ ರೆಡ್ಡಿ ಅವರಿಗೆ ಕೊಡಲಾಯಿತು. ಮೂಡಲಗಿ ಪಟ್ಟಣದ ಸತ್ಯಭಾಮಾ ಕಲ್ಯಾಣ ಮಂಟಪದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಅರಭಾವಿ ಕಾರ್ಯಾಲಯ ಮೂಡಲಗಿ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ತಾಲೂಕಾ ಘಟಕ ಮೂಡಲಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮೂಡಲಗಿ ಸಿವಿಲ್ ಹಾಗೂ ಜೆ ಎಮ್ ಎಫ್ ಸಿ ನ್ಯಾಯಾಧೀಶರಾದ ಜ್ಯೋತಿ ಪಾಟೀಲ್, ತಹಶೀಲ್ದಾರ್ ಶಿವಾನಂದ ಬಬಲಿ, ಬಿ ಇ ಒ ಅಜೀತ್ ಮನ್ನಿಕೇರಿ, ಸಿಡಿಪಿಒ ಯಲ್ಲಪ್ಪ ಗದಾಡಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಅವರು ವಿದ್ಯಾ ರೆಡ್ಡಿ ಅವರಿಗೆ ಕಿತ್ತೂರು ರಾಣಿ ಚನ್ನಮ್ಮ ಜಿಲ್ಲಾ ಯುವ ಪ್ರಶಸ್ತಿ ಪ್ರಧಾನ ಮಾಡಿದರು. ವೇದಿಕೆ ಮೇಲೆ ಮೂಡಲಗಿ ಪುರಸಭೆ ಅಧ್ಯಕ್ಷರಾದ ಖುರ್ಷಾದ ನದಾಫ್, ಉಪಾಧ್ಯಕ್ಷರಾದ ಭೀಮವ್ವಾ ಪೂಜೇರಿ, ತಾಲೂಕಾ ಪಂಚಾಯತ ಕಾರ್ಯನಿರ್ವಕ ಅಧಿಕಾರ ಎಫ್ ಜಿ ಚಿನ್ನಣ್ಣವರ, ಡಾ ಭಾರತಿ ಕೋಣಿ, ನ್ಯಾಯವಾದಿಗಳಾದ ಲಕ್ಷ್ಮಿಣ್ಣ ಅಡಿಹುಡಿ, ಜ್ಯೋತಿ ಕುಡತೆ, ತಾಲೂಕಾ ಅಧ್ಯಕ್ಷರಾದ ಜಗದೀಶ ಡೊಳ್ಳಿ, ವಿಠ್ಠಲ ಪೂಜೇರಿ, ಮಹಾದೇವ ಮುರಗೋಡ, ರಾಘವೇಂದ್ರ ಲಂಬುಗೋಳ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ಸುಭಾಷ ಗೊಡೆಗೋಳ, ಕವಿರತ್ನ ಕಾಳಿದಾಸ ಪ್ರಶಸ್ತಿ ಪುರಸ್ಕೃತ ಯಲ್ಲಾಲಿಂಗ ವಾಳದ, ಕಸ್ತೂರಿ ಪಡೆನ್ನವರ, ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತೆ ಮಾಯವ್ವಾ ದುರದುಂಡಿ, ಕಸ್ತೂರಿ ಪಡೆನ್ನವರ, ಇಂದ್ರಾ ಭೂವಿ, ಯಮುನಾ ತಳವಾರ ಹಾಗೂ ಈ ಮಹತ್ವದ ಸಮಾರಂಭದಲ್ಲಿ ಯುವ ಸಂಘದ ಪದಾಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಮಹಿಳಾ ಮುಖಂಡರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ