18 Nov 2026, 12:42:22 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ, ದ್ವಿಚಕ್ರ ವಾಹನ ಬೆಂಕಿಗಾಹುತಿ

*ಮಾಸ್ತಮರ್ಡಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್‌ರಿಂದ ಆರ್ಥಿಕ ನೆರವು*

ಬೆಳಗಾವಿ-17: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮಾಸ್ತಮರ್ಡಿ ಗ್ರಾಮದ ಬಸವ್ವ ದುಂಡಪ್ಪ ಮಾವಿನಕಟ್ಟಿ ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಸಂಪೂರ್ಣ ಮನೆ, ದ್ವಿಚಕ್ರ ವಾಹನ ಹಾಗೂ ಪ್ರಮುಖ ದಾಖಲೆಗಳು ಸುಟ್ಟುಹೋಗಿರುವ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ನೆರವು ನೀಡಿದರು.
ಮಾಸ್ತಮರ್ಡಿ ಗ್ರಾಮಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಬೆಂಕಿ ಅವಘಡದಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಸಂಕಷ್ಟದ ಸಂದರ್ಭದಲ್ಲಿ ಕುಟುಂಬದೊಂದಿಗೆ ನಿಂತು ಸಾಂತ್ವನ ಹೇಳಿದರು.
‘ಲಕ್ಷ್ಮೀತಾಯಿ ಫೌಂಡೇಶನ್’ ವತಿಯಿಂದ ತಕ್ಷಣದ ಪರಿಹಾರವಾಗಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದರು. ಅಲ್ಲದೆ, ಸರ್ಕಾರದ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ದೊರೆಯಬೇಕಾದ ಸೂಕ್ತ ಪರಿಹಾರವನ್ನು ಶೀಘ್ರವಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, “ಕಷ್ಟದಲ್ಲಿರುವ ಕುಟುಂಬಕ್ಕೆ ಆಸರೆಯಾಗುವುದು ನಮ್ಮ ಕರ್ತವ್ಯ. ಆಕಸ್ಮಿಕವಾಗಿ ಸಂಭವಿಸಿದ ಈ ದುರ್ಘಟನೆಯಿಂದ ಬಸವ್ವ ಅವರ ಕುಟುಂಬಕ್ಕೆ ಅಪಾರ ನಷ್ಟವಾಗಿದೆ. ಈ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.
ಅವಘಡದಿಂದ ಮನೆ ಹಾಗೂ ಅಗತ್ಯ ವಸ್ತುಗಳನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಮುಂದಿನ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ