18 Nov 2026, 12:41:51 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಜಯಜ್ಯೋತಿಗೆ ಸ್ವಾಗತ; ಕೋಟೆ ಆವರಣದಲ್ಲಿ ಸಂಭ್ರಮ

ವೀರರಾಣಿಯ ನೆಲದಲ್ಲಿ ಸಾಂಸ್ಕೃತಿಕ ವೈಭವ; ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ

ಬೆಳಗಾವಿ-24:ಬ್ರಿಟೀಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮನ ವಿಜಯೋತ್ಸವದ ಸ್ಮರಣಾರ್ಥ ಆಚರಿಸುವ ಕಿತ್ತೂರು ಉತ್ಸವವು ಶುಕ್ರವಾರ (ಅ.23) ಕಿತ್ತೂರಿನಲ್ಲಿ ಸಡಗರ ಹಾಗೂ ಸಂಭ್ರಮದಿಂದ ಆರಂಭಗೊಂಡಿತು. ಚನ್ನಮ್ಮನ ಉತ್ಸವದ ಸಂಭ್ರಮ, ಐತಿಹಾಸಿಕ ಪರಂಪರೆಯನ್ನು ನೆನಪಿಸುವ ವಾತಾವರಣ ಕಿತ್ತೂರಿನಲ್ಲಿ ನಿರ್ಮಾಣವಾಯಿತು.

ರಾಜ್ಯದಾದ್ಯಂತ ಸಂಚರಿಸಿದ ವೀರ ಜ್ಯೋತಿಯನ್ನು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಅವರು ಚನ್ನಮ್ಮ ವೃತ್ತದಲ್ಲಿ ಬರಮಾಡಿಕೊಂಡು, ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಜನಪ್ರತಿನಿಧಿಗಳು ಹಾಗೂ ಗಣ್ಯರು ವೀರರಾಣಿ ಕಿತ್ತೂರು ಚನ್ನಮ್ಮ ಸೇರಿದಂತೆ ಮಹನೀಯರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮತ್ತಿತರರು ಹಾಜರಿದ್ದರು.

ಆಕರ್ಷಕ ಜಾನಪದ ಕಲಾವಾಹಿನಿಗಳ ಮೆರವಣಿಗೆ:

ಕಿತ್ತೂರು ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಆಕರ್ಷಕ ಜಾನಪದ ಕಲಾವಾಹಿನಿಗೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಚಾಲನೆ ನೀಡಿದರು. ಡೊಳ್ಳುಕುಣಿತ, ಪುರವಂತಿಕೆ, ಜಗ್ಗಲಗಿ, ಕರಡಿ‌ ಮಜಲು, ಸಂಬಳ ವಾದನ, ಹಲಗೆ ವಾದನ, ಹೆಜ್ಜೆ ಮೇಳ, ತಮಟೆ ವಾದನ, ಗೊಂಬೆ ಕುಣಿತ, ಬುಜಂಗ ಯಕ್ಷಗಾನ, ನಂದಿ ಧ್ವಜ, ಕಂಸಾಳೆ, ಚಂಡೆ ವಾದನ‌, ಕರ್ಬಲ ಕುಣಿತ, ನಾಸಿಕ ಡೋಲು, ದಟ್ಟಿ ಕುಣಿತ, ಕಣಿ ವಾದನ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಆಕರ್ಷಕ‌ ಮೆರವಣಿಗೆಗೆ ಮೆರಗು ನೀಡಿದವು.

ಜಾನಪದ‌ ಕಲಾವಾಹಿನಿಗಳ ಜೊತೆಗೆ ವಿವಿಧ ಇಲಾಖೆಗಳಿಂದ ನೀಡಲಾಗುವ ಸರಕಾರದ‌ ಯೋಜನೆ, ಸೌಲಭ್ಯಗಳ ಸ್ತಬ್ದ ಚಿತ್ರಗಳು ನೆರೆದ ಜನರ ಗಮನ‌ ಸೆಳೆದವು.

ವಿವಿಧ ವಸ್ತುಪ್ರದರ್ಶನ ಮಳಿಗೆ:

ಕೋಟೆ ಆವರಣದಲ್ಲಿ ಸ್ಥಾಪಿಸಲಾಗಿರುವ ವಸ್ತುಪ್ರದರ್ಶನ ಮಳಿಗೆ, ಫಲಪುಷ್ಪ ಪ್ರದರ್ಶನವನ್ನು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೈಲಹೊಂಗಲ ಶಾಸಕ ಮಹಾಂತೇಶ‌ ಕೌಜಲಗಿ, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಇದ್ದರು.

ಕೃಷಿ, ಆರೋಗ್ಯ, ತೋಟಗಾರಿಕೆಗೆ ಸಂಬಂಧಿಸಿದಂತೆ 100 ವಸ್ತು ಪ್ರದರ್ಶನ ಮಳಿಗೆಗಳು ಹಾಗೂ 37 ವಿವಿಧ ಮಾದರಿಯ ಆಹಾರ ಮಳಿಗೆಗಳನ್ನು ಸ್ಥಾಪಿಸಲಾಗಿದೆ.
ಕಿತ್ತೂರು ಹಾಗೂ ಸುತ್ತಮುತ್ತಲ ಗ್ರಾಮಗಳ ನೂರಾರು ಜನರು ವಸ್ತುಪ್ರದರ್ಶನ ಮಳಿಗೆಗಳಿಗೆ ಭೇಟಿ ನೀಡಿ ಉತ್ಸವದಲ್ಲಿ ಭಾಗಿಯಾಗಿದ್ದರು.
ಮೂರು ದಿನಗಳ ಅದ್ಧೂರಿ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರೆತಿದ್ದು, ಕಿತ್ತೂರಿನ ಚನ್ನಮ್ಮನ ಕೋಟೆಯ ಆವರಣದಲ್ಲಿ ಸಂಭ್ರಮ ಮನೆಮಾಡಿದೆ.
***

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ