18 Nov 2026, 12:41:01 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳು ಬೃಹತ್ ಪ್ರತಿಭಟನೆ

ಬೆಳಗಾವಿ-01: ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.
ಸೋಮವಾರ ನಗರದಲ್ಲಿ ಎಲ್ಲಾ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಸಂಘಟನೆಗಳ ಸದಸ್ಯರು ಒಗ್ಗೂಡಿ ಸಭೆ ನಡೆಸಿದರು. ಬಳಿಕ ಅಲ್ಲಿಂದ ಮೆರವಣಿಗೆ ರ್ಯಾ ಲಿ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು.
ಕನಿಷ್ಠ ವೇತನ ಹೆಚ್ಚಳದಿಂದ ವ್ಯಾಪಾರ, ಕೈಗಾರಿಕೆ ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದ್ದು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮನೋಳಿ, ಈಗಾಗಲೇ ಉದ್ಯಮಗಳು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿವೆ. ಈಗ ಪುನಃ ಕನಿಷ್ಠ ವೇತನವನ್ನು ಹೆಚ್ಚಿಸಿದರೆ ಬಹಳಷ್ಟು ಉದ್ಯಮಗಳು ಬಾಗಿಲು ಮುಚ್ಚಲಿವೆ. ಇದರಿಂದ ನಿರುದ್ಯೋಗ ಸಮಸ್ಯೆಯೂ ಉಲ್ಬಣವಾಗಲಿದೆ. ಯಾವುದೇ ಕಾರಣಕ್ಕೆ ಈಗ ಆದೇಶಿಸಿರುವ ಕನಿಷ್ಠ ವೇತನ ನಿಯಮವನ್ನು ಜಾರಿಗೆ ತರಬಾರದು. ಹಂತ ಹಂತವಾಗಿ ಹೆಚ್ಚಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಒಮ್ಮೆಲೆ ಇಷ್ಟೊಂದು ಪ್ರಮಾಣದಲ್ಲಿ ಹೆಚ್ಚ್ಜಿಸುವುದು ಉದ್ಯಮಗಳಿಗೆ ದೊಡ್ಡ ಹೊಡೆತ ಬೀಳಲಿದೆ ಎಂದರು.
ಪಕ್ಕದ ರಾಜ್ಯಗಳಲ್ಲಿ ಕನಿಷ್ಠ ವೇತನ ಅತ್ಯಂತ ಕಡಿಮೆ ಇದೆ. ಆದರೆ ಕರ್ನಾಟಕದಲ್ಲಿ ಮಾತ್ರ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಉದ್ಯಮಗಳ ಉಳಿವಿಗೆ ಯಾವುದೇ ಸಹಾಯ ಮಾಡದೆ ಈ ರೀತಿ ವೇತನ ಹೆಚ್ಚಿಸುವುದರಿಂದ ಇಡೀ ಉದ್ಯಮವಲಯಕ್ಕೆ ಆಘಾತವಾಗಿದೆ ಎಂದು ತಿಳಿಸಿದರು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಉದ್ಯಮಿಗಳ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿಯೂ, ಶೀಘ್ರವೇ ನೂತನವಾಗಿ ನೇಮಕವಾಗಲಿರುವ ಕಾರ್ಮಿಕ ಸಚಿವರು ಹಾಗೂ ಕೈಗಾರಿಕಾ ಸಚಿವರ ಜೊತೆ ಸಭೆಯನ್ನು ಆಯೋಜಿಸಲು ಪ್ರಯತ್ನಿಸುವುದಾಗಿಯೂ ಭರವಸೆ ನೀಡಿದರು.
ಈ ವೇಳೆ ಚೇಂಬರ್ ಆಫ್ ಕಾಮರ್ಸ್ ಕಾರ್ಯದರ್ಶಿ ಸತೀಶ್ ಕುಲಕರ್ಣಿ, ವಾಣಿಜ್ಯೋದ್ಯಮ ಸಂಘದ ಎಲ್ಲಾ ಪದಾಧಿಕಾರಿಗಳು, ಸಣ್ಣ ಕೈಗಾರಿಕಾ ಸಂಘದ ಪದಾಧಿಕಾರಿಗಳು, ನಗರದ ವಿವಿಧ ಉದ್ಯಮಗಳ ನೂರಾರು ಪ್ರತಿನಿಧಿಗಳು ಸೇರಿದಂತೆ ಬೇರೆ ಬೇರೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ