20 Nov 2026, 02:11:28 AM|
Gold₹13023/gGold24K ₹13,023/g - 22K ₹11,927/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts Belagavi | International News

ಚಳಿಗಾಲದ ಅಧಿವೇಶನ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪರಿಶೀಲನೆ.

ಚಳಿಗಾಲದ ಅಧಿವೇಶನ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪರಿಶೀಲನೆ.

ಬೆಳಗಾವಿ-19: ವಿಧಾನ ಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 2 ರಿಂದ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಗುರುವಾರ ಸುವರ್ಣ ವಿಧಾನ ಸೌಧಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ ಅಧಿವೇಶನದ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮಾಧ್ಯಮ ಕೊಠಡಿ, ಬ್ಯಾಂಕ್ವೆಟ್ ಹಾಲ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಆಸನ ವ್ಯವಸ್ಥೆ, ಸ್ವಚ್ಛತೆ ಹಾಗೂ ಇತರೆ ಸೌಲಭ್ಯಗಳನ್ನು ಸುಸಜ್ಜಿತವಾಗಿ ಮಾಡಬೇಕು. ಪ್ರತಿಯೊಂದು ಪ್ರದೇಶದಲ್ಲಿಯೂ ಸಿಸಿ ಟಿವಿ ಕ್ಯಾಮೆರಾಗಳು ಕಡ್ಡಾಯವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.
ಯಾವುದೇ ರೀತಿಯ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಲಿಪ್ಟ್ಗಳು ಸುಗಮವಾಗಿ ಕಾರ್ಯನಿರ್ವಹಿಸುವಂತೆ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.
ಸಚಿವರು, ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಮಾರ್ಷಲ್ಗಳು ಹಾಗೂ ಇತರ ಸಿಬ್ಬಂದಿಗೆ ಊಟದ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. 
ಅಧಿವೇಶನದ ವೇಳೆ ಭದ್ರತೆ ಹಾಗೂ ಸಂಚಾರ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪೊಲೀಸ್ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಗತ್ಯ ಸ್ಥಳಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ವಾಹನಗಳ ಸಂಚಾರ ಹಾಗೂ ಪಾಕಿರ್ಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಶಾಸಕರು, ಸಚಿವರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಬಳಕೆ ಮಾಡುವ ಶೌಚಾಲಯಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸಿ, ಯಾವುದೇ ಕೊರತೆಯಾಗದಂತೆ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಈ ಸಂದರ್ಭದಲ್ಲಿ ನಗರ ಪೊಲೀಸ್  ಆಯುಕ್ತ ಪ್ರಕಾಶ್ ನಿಕ್ಕಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಲೋಕೋಪಯೋಗಿ, ಹೆಸ್ಕಾಂ, ಪೆÇಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Vishwanath Desai
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗಚಳಿಗಾಲದ ಅಧಿವೇಶನ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪರಿಶೀಲನೆ.ಶ್ರೀ ನಾಗೇಂದ್ರ ಮಹಾಸ್ವಾಮಿಗಳ 90ನೇ ಪುಣ್ಯಸ್ಮರಣೆಬೆಳಗಾವಿ  ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಪ್ರಥಮ ಬಾರಿಗೆ ಚುನಾಯಿತ ಜಿಮ್ಖಾನಾ ಯೂನಿಯನ್, ವಿದ್ಯಾರ್ಥಿ ಪರಿಷತ್ ಉದ್ಘಾಟನೆಮಹಾನಗರ ಪಾಲಿಕೆಯ ತೆರಿಗೆದಾರರಿಗೆ 3 ಜನಸ್ನೇಹಿ ಸೇವೆಗಳು : ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿಅನುಮತಿ ಇಲ್ಲದಿದ್ದರೂ ಮಹಾಮೇಳಾವ ನಡೆಸಲು ಎಂಇಎಸ್ ಪಟ್ಟುಬೆಳಗಾವಿಯಲ್ಲಿ 'ಸಿಜಿಎಚ್‌ಎಸ್' (CGHS) ವೆಲ್‌ನೆಸ್ ಸೆಂಟರ್ ಸ್ಥಾಪಿಸಲು ಆಗ್ರಹಿಸಿ ಕೇಂದ್ರ ಸರ್ಕಾರಿ ನೌಕರರಿಂದ ಸಂಸದ ಶೆಟ್ಟರ್ ಗೆ ಮನವಿಬೆಳಗಾವಿಯಲ್ಲಿ 'ಸಿಜಿಎಚ್‌ಎಸ್' (CGHS) ವೆಲ್‌ನೆಸ್ ಸೆಂಟರ್ ಸ್ಥಾಪಿಸಲು ಆಗ್ರಹಿಸಿ ಕೇಂದ್ರ ಸರ್ಕಾರಿ ನೌಕರರಿಂದ ಸಂಸದ ಶೆಟ್ಟರ್ ಗೆ ಮನವಿಬೆಳಗಾವಿಯಲ್ಲಿ 'ಸಿಜಿಎಚ್‌ಎಸ್' (CGHS) ವೆಲ್‌ನೆಸ್ ಸೆಂಟರ್ ಸ್ಥಾಪಿಸಲು ಆಗ್ರಹಿಸಿ ಕೇಂದ್ರ ಸರ್ಕಾರಿ ನೌಕರರಿಂದ ಸಂಸದ ಶೆಟ್ಟರ್ ಗೆ ಮನವಿಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ