18 Nov 2026, 12:31:18 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ' ಸಂಘಟನೆಯ ಪ್ರತಿಭಟನೆ

ಬೆಳಗಾವಿ-16: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ದಲಿತ ಸಮುದಾಯ ಹಾಗೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಮತ್ತು ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಳಗಾವಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರಿಗೆ 'ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ' ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಪ್ರವೀಣ್ ಆರ್. ಮಾದರ್ ಅವರು ಬುಧವಾರ ಪೊಲೀಸ್ ಅಧೀಕ್ಷಕರಿಗೆ ಅಧಿಕೃತ ದೂರು ಸಲ್ಲಿಸಿದರು.
ದೂರಿನ ಪ್ರಕಾರ, 'Mahadevwaghroastar' ಹೆಸರಿನ ಫೇಸ್ಬುಕ್ ಖಾತೆಯಿಂದ ಹಂಚಿಕೊಳ್ಳಲಾದ ವಿಡಿಯೋದಲ್ಲಿ ದಲಿತ ಸಮುದಾಯವನ್ನು ಅವಹೇಳನ ಮಾಡುವ ರೀತಿಯ ಪದಗಳನ್ನು ಬಳಸಲಾಗಿದೆ. ಅಲ್ಲದೆ, ಮಹಿಳೆಯರ ವಿರುದ್ಧವೂ ಅವಾಚ್ಯ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ರೀತಿಯ ಪೋಸ್ಟ್ಗಳು ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವುದರ ಜೊತೆಗೆ ಮಹಿಳೆಯರ ಗೌರವಕ್ಕೂ ಅವಮಾನ ಉಂಟುಮಾಡುವಂತಿವೆ. ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಸೃಷ್ಟಿಸುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಘಟನೆಯ ಮುಖಂಡರು ಆಗ್ರಹಿಸಿದರು.
ಮಹಿಳೆಯರ ವಿರುದ್ಧದ ಅವಹೇಳನಕಾರಿ ಹೇಳಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅವಮಾನಿಸಿರುವ ಆರೋಪದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ–1989ರಡಿ ಪ್ರಕರಣ ದಾಖಲಿಸಿ, ಸಂಬಂಧಿತ ಫೇಸ್ಬುಕ್ ಖಾತೆದಾರರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಒತ್ತಾಯಿಸಿದರು.
ಈ ವೇಳೆ ರಾಜ್ಯ ಉಪಾಧ್ಯಕ್ಷ ಅಕ್ಷಯ ಕೆ.ಆರ್., ಬೆಳಗಾವಿ ಜಿಲ್ಲಾ ಅಧ್ಯಕ್ಷ ಸಚೀನ ಕೋಲಕಾರ, ಜಿಲ್ಲಾ ಉಪಾಧ್ಯಕ್ಷ ಆಕಾಶ ಕಾಂಬಳೆ, ದಲಿತ ಮುಖಂಡ ಮಲ್ಲಪ್ಪ ಅಕ್ಕಮಡ್ಡಿ ಸೇರಿದಂತೆ ಹಲವರು ದಲಿತ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು .

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಸಮ್ಮಾನ’ ಸಂಗೀತ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ73ನೇ ಸಹಕಾರ ಸಪ್ತಾಹ–2026ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ), ಬೆಳಗಾವಿ  ರಾಜ್ಯ ಮಟ್ಟದ "ರಾಷ್ಟ್ರಕೂಟ ಸಾಹಿತ್ಯಶ್ರೀ" ಪ್ರಶಸ್ತಿಗೆ ಆಯ್ಕೆಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ ಮದ್ಯ ಕಳ್ಳಸಾಗಣೆಗ್ರಾಮೀಣ ಸಮುದಾಯಗಳಲ್ಲಿ ದೃಷ್ಟಿ ರಕ್ಷಿಸಲು ಬೆಳಗಾವಿಯ ರೋಟರಿ ಕ್ಲಬ್ ಸಂಚಾರಿ ಮಧುಮೇಹ ರೆಟಿನೋಪತಿ ತಪಾಸಣಾ ಯೋಜನೆಯನ್ನು ಪ್ರಾರಂಭಿಸಿದೆಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ